
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು-ಗುವಾಹಟಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.
ಆಂಧ್ರಪ್ರದೇಶದ ಸಿಂಹಾಚಲಂ ಬಳಿ ರೈಲಿನ ಸ್ಲೀಪರ್ ಕೋಚ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. S-7 ಕೋಚ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಲೋಕೋ ಪೈಲೆಟ್ ರೈಲನ್ನು ನಿಲ್ಲಿಸಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದೆ. ಘಟನೆಯಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ. ಪ್ರಯಾಣಿಕರನ್ನು ಕೋಚ್ ನಿಂದ ಸ್ಥಳಾಂತರಿಸಲಾಗಿದೆ. ಹಾಗೂ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ರೈಲು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ