ಫೆ.26ರಿಂದ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಫೆ.26 ರಿಂದ ಮಾ.4ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜಿಸಲಾಗಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್ ತಿಳಿಸಿದ್ದಾರೆ.

ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಈಗಾಗಲೇ ಸಕಲ ಸಿದ್ಧತೆ ಕೈಗೊಳ್ಳಲಾಗಿದ್ದು, ಈ ಚಲನಚಿತ್ರೋತ್ಸವದಲ್ಲಿ 50 ದೇಶಗಳ ಸುಮಾರು 150 ಚಿತ್ರಗಳು ಹಾಗೂ ಕನ್ನಡದ 32 ಚಿತ್ರಗಳು ಪ್ರದರ್ಶನಗೊಳ್ಳಲಿದೆ ಎಂದರು.

ಕಂಠೀರವ ಸ್ಟುಡಿಯೋದಲ್ಲಿ ಕಾರ್ಯಕ್ರಮ ಉದ್ಘಾಟನೆ ನಡೆಯಲಿದ್ದು, ಕಂಠೀರವ ಸ್ಟುಡಿಯೋ ಹಾಗೂ ಒರಾಯನ್ ಮಾಲ್ ನಲ್ಲಿ ಚಿತ್ರ ಪ್ರದರ್ಶನಗೊಳ್ಳಲಿದೆ. ಈ ಚಲನಚಿತ್ರೋತ್ಸವದಲ್ಲಿ ರಾಷ್ಟ್ರದ ಪ್ರಮುಖ ನಿರ್ದೇಶಕರು, ನಟರು, ತಂತ್ರಜ್ಞರು ಸೇರಿದಂತೆ ವಿದೇಶದಿಂದಲೂ ನಿರ್ದೇಶಕರು, ತಂತ್ರಜ್ಞರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇನ್ನು ಬೆಂಗಳೂರಿಗೆ ಸೀಮಿತಗೊಂಡ ಅಕಾಡೆಮಿಯನ್ನು ಇತರ ಜಿಲ್ಲೆಗಳಿಗೆ ತರಲು ಉದ್ದೇಶಿಸಲಾಗಿದೆ. ಐತಿಹಾಸಿಕ ಸ್ಥಳವಾದ ಚಿತ್ರದುರ್ಗ, ಬಿಜಾಪುರ ಮೊದಲಾದ ಸ್ಥಳಗಳಲ್ಲಿ ಲೈಬ್ರರಿ ತೆಗೆಯುವ ಮೂಲಕ ಕನ್ನಡ ಚಲನಚಿತ್ರ ನಡೆದು ಬಂದ ದಾರಿಯ ಇತಿಹಾಸವನ್ನು ತೋರಿಸಲಾಗುವುದು ಎಂದು ಹೇಳಿದರು.

ಅಲ್ಲದೇ ಅಕಾಡೆಮಿ ಪ್ರಶಸ್ತಿಗಳು ಘೋಷಣೆ ಮಾಡುವುದು ಹಾಗೂ ಸಿನಿಮಾಗೆ ಸಬ್ಸಿಡಿ ನೀಡುವ ಕಾರ್ಯ ವಾರ್ತಾ ಇಲಾಖೆ ಬಳಿ ಇದೆ. ಆದರೆ ಇದನ್ನು ಚಲನಚಿತ್ರ ಅಕಾಡೆಮಿಗೆ ವಹಿಸಬೇಕು ಎಂಬುದು ಎಲ್ಲರ ಅಭಿಪ್ರಾಯವಾಗಿದೆ ಎಂದು ಇದೇ ವೇಳೆ ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button