Kannada NewsKarnataka NewsLatestTravel

*ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಹೊಸ ರೈಲು ಕೆಎಸ್‌ಆರ್ ಬೆಂಗಳೂರು ಮತ್ತು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಡುವೆ ಸಂಚರಿಸಲಿದೆ.

ಸಂಸದ ಪಿ.ಸಿ. ಮೋಹನ್ ಅವರ ಪ್ರಯತ್ನದಿಂದ ಈ ಯೋಜನೆಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಪ್ರಯಾಣದ ಸಮಯ ಗಣನೀಯವಾಗಿ ಕಡಿಮೆಯಾಗಿ ಪ್ರಯಾಣಿಕರಿಗೆ ಆರಾಮದಾಯಕ ಮತ್ತು ವೇಗದ ಸೇವೆ ಲಭ್ಯವಾಗಲಿದೆ.

ಡಿಸೆಂಬರ್ 2 ರಂದು ನೈಋತ್ಯ ರೈಲ್ವೆ (SWR) ಸ್ಥಾಯಿ ಸಮಿತಿಯ ಅಧ್ಯಯನ ಭೇಟಿಯ ಸಂದರ್ಭದಲ್ಲಿ, ಪಿ.ಸಿ. ಮೋಹನ್ ವಂದೇ ಭಾರತ್ ಸ್ಲೀಪರ್ ರೈಲನ್ನು ಪರಿಚಯಿಸಲು ಒತ್ತಾಯಿಸಿದ್ದರು. ಅಲ್ಲದೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್​ ಅನ್ನು ಮೂಲ ಅಥವಾ ಮುಕ್ತಾಯ ನಿಲ್ದಾಣವೆಂದು ಸೂಚಿಸಿದ್ದರು.

ಪ್ರಸ್ತುತ ಈ ಮಾರ್ಗದಲ್ಲಿ ಡಜನ್‌ಗಟ್ಟಲೆ ರೈಲುಗಳು ಸಂಚರಿಸುತ್ತಿದ್ದರೂ, ಉದ್ಯಾನ್ ಎಕ್ಸ್‌ಪ್ರೆಸ್ ಮಾತ್ರ ನೇರ ಸಂಪರ್ಕ ಕಲ್ಪಿಸುತ್ತಿದೆ. ಸುಮಾರು 1,136 ಕಿಮೀ ದೂರವನ್ನು ಈ ರೈಲು 23ರಿಂದ 24 ಗಂಟೆಗಳ ಅವಧಿಯಲ್ಲಿ ಸಾಗುತ್ತದೆ. ಹೊಸ ವಂದೇ ಭಾರತ್ ಸ್ಲೀಪರ್ ರೈಲು ಪರಿಚಯದಿಂದ ಪ್ರಯಾಣ ಸಮಯವು ಗಣನೀಯವಾಗಿ ಕಡಿಮೆಯಾಗುವ ನಿರೀಕ್ಷೆಯಿದ್ದು, ಪ್ರಯಾಣಿಕರಿಗೆ ಹೆಚ್ಚು ಆರಾಮದಾಯಕ ಮತ್ತು ವೇಗದ ಸೇವೆ ಲಭ್ಯವಾಗಲಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button