Karnataka NewsLatest

*KSRTC ಬಸ್ ಭೀಕರ ಅಪಘಾತ: 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಕಂಟೈನರ್ ವಾಹನಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿದೆ. ಪರಿಣಾಮ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಮಂಡ್ಯ ಜಿಲ್ಲೆಯ ಸಾಂಜೋ ಆಸ್ಪತ್ರೆ ಬಳಿ ಹೆದ್ದಾರಿಯಿಂದ ಸರ್ವಿಸ್ ರೋಡ್ ಗೆ ಬಸ್ ತೆರಳುತ್ತಿದ್ದಾಗ ಚಾಲಕ ನಿಯಂತ್ರ ತಪ್ಪಿದ ಬಸ್ ಜಂಪ್ ಆಗಿ ಕಂಟೈನರ್ ವಾಹನಕ್ಕೆ ಡಿಕ್ಕಿ ಹೊಡೆದು ಪಲಿಯಾಗಿದೆ. ಈ ವೇಳೆ ಬಸ್ ಗೆ ಗುದ್ದಿ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.


Related Articles

Back to top button