ಪ್ರಗತಿ ವಾಹಿನಿ ಸುದ್ದಿ, ಬೆಂಗಳೂರು:ಬೆಂಗಳೂರು-ಮೈಸೂರು ನಡುವಿನ ದಶಪಥಗಳ ಹೆದ್ದಾರಿಯನ್ನು ಫೆಬ್ರವರಿ ಅಂತ್ಯದಲ್ಲಿ ಉದ್ಘಾಟಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಇಲ್ಲವೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲಾಗುವುದು ಎಂದರು.
ಬೆಂಗಳೂರು-ಮೈಸೂರು ಹೆದ್ದಾರಿಯು ರಾಜ್ಯದ ಆರ್ಥಿಕ ಪ್ರಗತಿ ಹಾಗೂ ಕೈಗಾರಿಕೆಗಳ ಪ್ರಗತಿಗೆ ಅನುಕೂಲ ಆಗಲಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರ ಅಧ್ಯಕ್ಷತೆಯಲ್ಲಿ ಇಂದು ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಕುರಿತು ಪರಿಶೀಲನಾ ಸಭೆ ಜರುಗಿತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್, ಹಾಗೂ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
https://pragati.taskdun.com/man-stabbed-to-die-by-unknown-accused-in-aigali-police-station-limits/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ