LatestPolitics

*ಬೆಂಗಳೂರಿನಲ್ಲಿ ಭಾರಿ ಮಳೆ: ಬಿಬಿಎಂಪಿ ಕಂಟ್ರೋಲ್ ರೂಂ ಗೆ ಭೇಟಿ ನೀಡಿ ಪರಿಹಾರ ಕ್ರಮ ಪರಿಶೀಲಿಸಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ ಕೇಂದ್ರ ಕಚೇರಿಯ ನಿಯಂತ್ರಣ ಕೊಠಡಿಗೆ ಮಂಗಳವಾರ ಸಂಜೆ ಭೇಟಿ ನೀಡಿ, ಬೆಂಗಳೂರಿನಲ್ಲಿ ಸುರಿಯುತ್ತಿರುವ ಸತತ ಮಳೆ ಪರಿಣಾಮಗಳು ಹಾಗೂ ಪರಿಹಾರ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.

ಈ ವೇಳೆ ಎಲ್ಲಾ ವಲಯ ಅಧಿಕಾರಿಗಳ ಜೊತೆ ವರ್ಚ್ಯುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಳೆ ವಿಚಾರ, ನಿಯಂತ್ರಣ ಕೊಠಡಿಯಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ, ಸ್ಚಚ್ಛತಾ ಡ್ರೈವ್ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಕುರಿತು ಚರ್ಚಿಸಿದರು.

ಈ ವೇಳೆ ಬಿಡಿಎ ಅಧ್ಯಕ್ಷರಾದ ಎನ್.ಎ ಹ್ಯಾರೀಸ್, ಆಡಳಿತಗಾರ ಉಮಾಶಂಕರ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಜಯರಾಮ್, ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ. ಹರೀಶ್ ಕುಮಾರ್, ಬಿ.ಎಂ.ಆರ್.ಡಿ.ಎ ಆಯುಕ್ತ ರಾಜೇಂದ್ರ ಚೋಳನ್, ಪ್ರಧಾನ ಅಭಿಯಂತರರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Home add -Advt

Related Articles

Back to top button