Kannada NewsKarnataka NewsLatest
*ಬೆಂಗಳೂರು ಸಂಚಾರ ಪೊಲೀಸರಿಂದ DD & Over Speed ವಿರುದ್ಧ ಬೃಹತ್ ಕಾರ್ಯಾಚರಣೆ: ಒಂದೇ ವಾರದಲ್ಲಿ 763 ಕೇಸ್!*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಹಾಗೂ ಅತಿವೇಗ ಚಾಲಕರ ಹಾವಳಿ ತಡೆಗಟ್ಟಲು ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.
ದಿನಾಂಕ 07.09.2026 ರಿಂದ 13.09.2026 ರವರೆಗೆ ನಗರದ 53 ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಈ ವಿಶೇಷ ಡ್ರೈವ್ ನಡೆಸಲಾಗಿದೆ ಎಂದು ದಿನಾಂಕ 14.09.2026 ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಾರ್ಯಾಚರಣೆಯ ವಿವರ:
- ಕುಡಿದು ವಾಹನ ಚಾಲನೆ (Drunk & Driving) ವಿರುದ್ಧ:
- ಪರಿಶೀಲಿಸಲಾದ ಒಟ್ಟು ವಾಹನಗಳ ಸಂಖ್ಯೆ: 38,680
- ದಾಖಲಿಸಿದ ಒಟ್ಟು ಪ್ರಕರಣಗಳ ಸಂಖ್ಯೆ: 560
- ಅತಿವೇಗ ಚಾಲನೆ (Over Speeding) ವಿರುದ್ಧ:
- ದಾಖಲಿಸಿದ ಒಟ್ಟು ಪ್ರಕರಣಗಳ ಸಂಖ್ಯೆ: 203
- ಸಂಗ್ರಹಿಸಿದ ಒಟ್ಟು ದಂಡದ ಮೊತ್ತ: ರೂ. 2,12,000/-
ಬೆಂಗಳೂರು ನಗರದಲ್ಲಿ ರಸ್ತೆ ಸುರಕ್ಷತೆ ಕಾಪಾಡುವ ಉದ್ದೇಶದಿಂದ ಈ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿಯೂ ಇಂತಹ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.



