Kannada NewsKarnataka NewsLatest

*ಭಾರಿ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್, ಮತ್ತೆ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರಿಸಲಿದ್ದು, ಮುಂದಿನ ಐದು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಜಿಟಿ ಜಿಟಿ ಮಾಳೆಯಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ಅವಾಂತರಕ್ಕೆ ವಿವಿಧ ಜಿಲ್ಲೆಗಳಲ್ಲಿ ರೈತರು ಬೆಳೆದ ಬೆಳೆಗಳು ಸಂಪೂರ್ಣ ನಾಶವಾಗಿದೆ.

Home add -Advt

ಮುಂದಿನ ಎರಡು ದಿನ ಬೆಂಗಳೂರು ಸೇರಿ ಕರ್ನಾಟಕ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನು ಉತ್ತರ ಕರ್ನಾಟಕ ಭಾಗಗಳಲ್ಲಿ ಕೂಡ ಮಳೆ ಹೆಚ್ಚಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಹಾಸನ, ಕೋಲಾರ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಶಿವಮೊಗ್ಗ, ರಾಮನಗರ, ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಕೂಡ ಮಳೆಯಾಗಲಿದೆ.

Related Articles

Back to top button