*15 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ; ವಿದ್ಯಾರ್ಥಿಗಳು, ಪೋಷಕರು ಕಂಗಾಲು; ಬೆಚ್ಚಿಬಿದ್ದ ಬೆಂಗಳೂರಿಗರು*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಶಾಲೆಗಳಿಗೆ ಬಂಬ್ ಬೆದರಿಕೆ ಕರೆ ಬಂದಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಕಂಗಾಲಾಗಿದ್ದಾರೆ.
ಬೆಂಗಳೂರಿನ ಬಸವೇಶ್ವರನಗರ ಖಾಸಗಿ ಶಾಲೆ, ಯಲಹಂಕದ ಖಾಸಗಿ ಶಾಲೆ, ಸದಾಶಿವ ನಗರದ ಖಾಸಗಿ ಶಾಲೆ ಸೇರಿದಂತೆ 15 ಶಾಲೆಗಳಿಗೆ ಕಿಡಿಗೇಡಿಗಳು ಏಕಕಾಲದಲ್ಲಿ ಬಾಂಬ್ ಬೆದರಿಕೆ ಹಾಕಿದ್ದಾರೆ.
ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿರುವ ಪೋಷಕರು ಶಾಲಾ ಮಕ್ಕಳನ್ನು ವಾಪಾಸ್ ಮನೆಗೆ ಕರೆದೊಯ್ದಿದ್ದಾರೆ. ಶಿಕ್ಷಕರು, ಸಿಬ್ಬಂದಿಗಳನ್ನು ಶಾಲೆಯಿಂದ ಹೊರಗೆ ಕಳುಹಿಸಿ ಬಾಂಬ್ ಸ್ಕ್ವಾಡ್, ಶಾನದಳ ಶಾಲೆಯಲ್ಲಿ ಪರಿಶೀಲನೆ ನಡೆಸಿದೆ.
ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ವಿಚಾರವಾಗಿ ಮಾತನಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಇದು ಹುಸಿ ಬಾಂಬ್ ಕರೆಯಾಗಿದೆ. ಯಾರು ಈ ಬೆದರಿಕೆ ಹಾಕಿದ್ದು ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಕಳೆದ ಒಂದು ವರ್ಷದಿಂದ ಬೆಂಗಳೂರಿನ ವಿವಿಧ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬರುತ್ತಿದ್ದು, ವಿದ್ಯಾರ್ಥಿಗಳು, ಪೋಷಕರು ಆತಂಕಕ್ಕೀಡಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ