Kannada NewsKarnataka NewsLatest

*ಏರ್ ಪೋರ್ಟ್ ನಲ್ಲಿ ಬರೋಬ್ಬರಿ 4.22 ಕೋಟಿ ಮೌಲ್ಯದ ಮಾದಕ ವಸ್ತು ಪತ್ತೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ವಿದೇಶದಿಂದ ಆಗಮಿಸಿದ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 4.22 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್ ನಿಂದ ಬಂದ ಪ್ರಯಾಣಿಕನನ್ನು ತಪಾಸಣೆಗೊಳಪಡಿಸಿದಾಗ ಅಕ್ರಮವಾಗಿ ಸಾಗಿಸುತ್ತಿದ್ದ 12.07 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

Home add -Advt

ಎನ್​​ಡಿಪಿಎಸ್​​ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ವಶಪಡಿಸಿಕೊಳ್ಳಲಾಗಿರುವ ಹೈಡ್ರೋಪೋನಿಕ್ ಗಾಂಜಾದ ಮೌಲ್ಯ ಸುಮಾರು 4 ಕೋಟಿ 22 ಲಕ್ಷ ರೂಪಾಯಿಗಳು ಎನ್ನಲಾಗಿದೆ. ಬ್ಯಾಂಕಾಕ್​​ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕ ಲಗೇಜ್ ಬ್ಯಾಗ್​​ನಲ್ಲ ಮಾದಕ ವಸ್ತುವನ್ನು ಅಡಗಿಸಿಟ್ಟುಕೊಂಡು ಬರುವ ಮೂಲಕ ಸಾಗಾಟ ಯತ್ನ ನಡೆಸಿದ್ದ. ಆದರೆ ಏರ್​​ಪೋರ್ಟ್​​ಬಲ್ಲಿ ಪ್ರಯಾಣಿಕರ ತಪಾಸಣೆ ವೇಳೆ ಗಾಂಜಾವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

Related Articles

Back to top button