Kannada NewsKarnataka NewsLatest

*ಏರ್ ಪೋರ್ಟ್ ನಲ್ಲಿ ಬರೋಬ್ಬರಿ 2.97 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಪ್ರಯಾಣಿಕರ ಸೋಗಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ಅವರಿಂದ 2.97 ಕೋಟಿ ರೂ. ಮೌಲ್ಯದ ಗಾಅಂಜಾ ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ ಬೃಹತ್ ಕಾರ್ಯಾಚರಣೆ ನಡೆಸಿರುವ ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 2.97 ಕೋಟಿ ರೂ. ಮೌಲ್ಯದ 8.5 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಥಾಯ್ಲೆಂಡ್ ಮತ್ತು ಮಲೇಶಿಯಾದಿಂದ ಬಂದ ಮೂವರು ಪ್ರಯಾಣಿಕರನ್ನು ಲಗೇಜ್ ಬ್ಯಾಗ್‌ಗಳನ್ನು ಪರಿಶೀಲಿಸಿದಾಗ ಪ್ಯಾಕೆಟ್‌ಗಳಲ್ಲಿ ಗಾಂಜಾ ಪತ್ತೆಯಾಗಿದೆ. ಇದರ ಮೌಲ್ಯ ಸುಮಾರು 2.97 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

Home add -Advt


Related Articles

Back to top button