Kannada NewsKarnataka NewsLatest

*ನಿನ್ನೆ ಆನೆ ದಾಳಿಗೆ ವ್ಯಕ್ತಿ ಬಲಿಯಾದ ಜಾಗದಲ್ಲೇ ಇಂದು ಚಿರತೆ ಪ್ರತ್ಯಕ್ಷ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚುತ್ತಿದೆ. ನಿನ್ನೆ ವಾಕಿಂಗ್ ಗೆ ಹೋಗಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ ಮಾಡಿ ವ್ಯಕ್ತಿಯನ್ನು ಬಲಿ ಪಡೆದಿದ್ದ ಸ್ಥಳದ ಬಳಿಯೇ ಇಂದು ಚಿರತೆ ಪ್ರತ್ಯಕ್ಷವಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಹಿಂಭಾದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ನಾಗರಾಜ್ ಬಲಿಯಾಗಿದ್ದರು. ಇಂದು ಅದೇ ಭಾಗದ ಆಂಚೆಪಾಳ್ಯದ ನಿರ್ಜನ ಪ್ರದೇಶದಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಚಿರತೆ ಕಾಣಿಸಿಕೊಂಡಿದೆ.

ಚಿರತೆ ಓಡಾಟದ ದೃಶ್ಯವನ್ನು ಅಲ್ಲಿದ್ದ ಸೆಕ್ಯೂರಿಟಿ ಗಾರ್ಡ್‌ಗಳು ಸೆರೆಹಿಡಿದ್ದಾರೆ. ನಿನ್ನೆಯಷ್ಟೇ ಕಾಡಾನೆ ದಾಳಿ ನಡೆಸಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿತ್ತು. ಬಳಿಕ ಅರಣ್ಯ ಅಧಿಕಾರಿಗಳು ಡ್ರೋನ್ ಬಳಸಿ, ಕಾಡಾನೆಯನ್ನು ಪತ್ತೆ ಮಾಡಿ ವಾಪಸ್ ಬನ್ನೇರುಘಟ್ಟ ಕಾಡಿಗಟ್ಟಿದ್ದಾರೆ. ಇದರ ಬೆನ್ನಲ್ಲೇ ಚಿರತೆ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button