
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೋಲಾರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಶಾಲೆಯಲ್ಲಿಯೂ ಇಂತಹ ಘಟನೆ ನಡೆದಿದ್ದು, ವಿದ್ಯಾರ್ಥಿಗಳಿಂದ ಶೌಚಾಲಯ ಕೀಲ್ನ್ ಮಾಡಿಸಿದ ಘಟನೆ ನಡೆದಿದೆ.
ಬೆಂಗಳೂರಿನ ಪೀಣ್ಯದ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸಲಗಾಗಿದ್ದು, ಘಟನೆ ಬಗ್ಗೆ ಪೋಷಕರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಬೆಂಗಳೂರು ಉತ್ತರ ಬಿಇಒ ಕೆ.ಜಿ.ಅಂಜನಪ್ಪ ಶಾಲೆಗೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಪ್ರಕರಣ ಸಂಬಂಧ, ಮುಖ್ಯ ಶಿಕ್ಷಕಿ ಲಕ್ಷ್ಮೀ ದೇವಮ್ಮ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ