Kannada NewsKarnataka NewsLatest

*ನಿರ್ಮಾಣ ಹಂತದ ಕಟ್ಟಡದಲ್ಲಿ ಸ್ಫೋಟ ಪ್ರಕರಣ*: *ತನಿಖೆಗೆ NIA ಎಂಟ್ರಿ*

ಪ್ರಗತಿವಾಹಿನಿ ಸುದ್ದಿ: ನಿರ್ಮಾಣ ಹಂತದ ಕಟ್ಟಡದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿತ್ತು. ಕಟ್ಟಡದಲ್ಲಿ ಸ್ಫೋಟ ಪ್ರಕರಣದ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದೆ.

ಪುಲಕೇಶಿನಗರದಲ್ಲಿ ನಡೆದ ನಿರ್ಮಾಅಣ ಹಂತದ ಕಟ್ಟಡದಲ್ಲಿ ಸ್ಫೋಟ ಪ್ರಕರಣದ ಕುರಿತು ತನಿಖೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಎಂಟ್ರಿ ಕೊಟ್ಟಿದೆ.

ರಾಜಧಾನಿ ಬೆಂಗಳೂರಿನ ಪುಲಿಕೇಶಿನಗರದಲ್ಲಿ ನಡೆದ ಅನುಮಾನಾಸ್ಪದ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿದೆ. ಎನ್ ಐಎ ಅಧಿಕಾರಿಗಳು ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ತನಿಖಾ ವರದಿಗಳನ್ನು ಕೇಳಿವೆ.

ಪ್ರಾಥಮಿಕ ತನಿಖೆಯಲ್ಲಿ, ಸ್ಫೋಟಕ್ಕೆ ಸುಧಾರಿತ ಸ್ಫೋಟಕ ಸಾಧನ (IED) ಬಳಸಲಾಗಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಸ್ಥಳ ಪರಿಶೀಲನೆ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನು ಪರಿಶೀಲಿಸಿದ ಬಳಿಕ ಪ್ರಕರಣದ ತನಿಖೆಯಲ್ಲಿ ಎನ್‌ಐಎ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ಎನ್ ಐಎ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುವ ಸಾಧ್ಯತೆಯೂ ಇದ್ದು, ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನು ಕೂಡ ಪರಿಶೀಲಿಸಲಿದ್ದಾರೆ. ಸ್ಥಳ ಪರಿಶೀಲನೆ ಮತ್ತು ಲಭ್ಯವಿರುವ ಸಾಕ್ಷ್ಯಗಳನ್ನು ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಮೂರು ಬ್ಯಾಟರಿಗಳನ್ನು ಬಳಸಿ ಸ್ಫೋಟಕ ಸಾಧನವನ್ನು ಸ್ಫೋಟಿಸಲಾಗಿದೆಯೇ ಎಂಬ ಅನುಮಾನ ಪ್ರಾಥಮಿಕ ತನಿಖೆಯ ವೇಳೆ ವ್ಯಕ್ತವಾಗಿದೆ. ಸ್ಫೋಟದ ನಿಖರ ಸ್ವರೂಪ ಮತ್ತು ಬಳಸಲಾಗಿರುವ ವಸ್ತುಗಳ ಬಗ್ಗೆ ವಿಧಿವಿಜ್ಞಾನ ವರದಿಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಈ ಪ್ರಕರಣದ ತನಿಖೆಯನ್ನು ಎಟಿಸಿ ಹಾಗೂ ಸ್ಥಳೀಯ ಪೊಲೀಸರು ಮುಂದುವರಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button