Karnataka News

*ನಿರ್ಮಾಣ ಹಂತದ ಕಟ್ಟಡ ಕುಸಿತ; ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ* *ಸಿಎಂ ಭೇಟಿ*

ಅವಶೇಷಗಳಡಿಯಿಂದ 8 ಜನರ ಮೃತದೇಹ ಹೊರಕ್ಕೆ


ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಅಬ್ಬರದ ನಡುವೆ ದುರಂತ ಸಂಭವಿಸಿದ್ದು, ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಅವಶೇಷಗಳಡಿಯಿಂದ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ತಂಡ ಇದೀಗ ಮತ್ತೆ ಎರಡು ಮೃತದೇಹಗಳನ್ನು ಹೊರತೆಗೆದಿವೆ.

ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಈವರೆಗೆ 13 ಜನರನ್ನು ರಕ್ಷಿಸಲಾಗಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಇನ್ನೂ ಮೂರು ಜನರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಭಾರಿ ಮಳೆ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

Home add -Advt

ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ಅ.22ರ ಸಂಜೆ ನಿರ್ಮಾಣ ಹಂತದ ಕಟ್ಟಡ ಕುಸಿದು ದುರಂತ ಸಂಭವಿಸಿತ್ತು. ಪ್ರಕರಣ ಸಂಬಂಧ ಕಟ್ಟಡದ ಮಾಲೀಕ ಭುವನ್ ರೆಡ್ಡಿ ಹಾಗೂ ಗುತ್ತಿಗೆದಾರನನ್ನು ಪೊಲೀಸರು ಬಂಧಿಸಿದ್ದಾರೆ.

ಕಟ್ಟಡ ಕುಸಿತ ದುರಂತ ಸಂಭವಿಸಿರುವ ಬಾಬುಸಾಬ್ ಪಾಳ್ಯಕ್ಕೆ ಇಂದು ಸಂಜೆ 5.30 ಗಂಟೆಗೆ ಮುಖ್ಯಮಂತ್ರಿಗಳು ಭೇಟಿ ನೀಡಲಿದ್ದಾರೆ.

Related Articles

Back to top button