Politics

*ನಿರ್ಮಾಣ ಹಂತದ ಕಟ್ಟಡ ಕುಸಿದು ದುರಂತ: ಘಟನಾ ಸ್ಥಳಕ್ಕೆ ಸಿಎಂ ಭೇಟಿ; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ದುರಂತದಲ್ಲಿ 8 ಜನರು ಮೃತಪಟ್ಟಿದ್ದು, ಇಂದು ಘಟನಾ ಸ್ಥಳಕ್ಕೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ಅ.22ರ ಸಂಜೆ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದು ದುರಂತ ಸಂಭವಿಸಿತ್ತು.ಈವರೆಗೆ ಅವಶೆಷಗಳಡಿಯಲ್ಲಿ ಸಿಲುಕಿದ್ದ 8 ಜನರ ಮೃತದೇಹವನ್ನು ಹೊರತೆಗೆಯಲಾಗಿದ್ದು, ಇನ್ನೂ ಇಬ್ಬರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ. 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನ ಅಸ್ಥಳಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಘಟನೆಯಲ್ಲಿ 8 ಜನರು ಸಾವನ್ನಪ್ಪಿದ್ದಾರೆ. 8 ಜನರನ್ನು ರಕ್ಷಿಸಲಾಗಿದೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದರು. ಇದೇ ವೇಳೆ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ. ಚಿಕಿತ್ಸೆ ಬಳಿಕ ಗಾಯಾಳುಗಳಿಗೂ ಪರಿಹಾರ ನೀಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಘಟನಾ ಸ್ಥಳ ಪರಿಶೀಲನೆ ಬಳಿಕ‌ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಗತ್ಯ ಇರುವ ಎಲ್ಲಾ ಆಧುನಿಕ ವ್ಯವಸ್ಥೆ ಬಳಿಕ ಕಾರ್ಮಿಕರಿಗೆ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

Home add -Advt

https://pragativahini.com/8-dead-in-building-collapse-prime-minister-did-not-announce-relief

Related Articles

Back to top button