*ರಾಜ್ಯದಲ್ಲಿ ಮತ್ತೊಂದು ಭೀಕರ ಬೆಂಕಿ ಅವಘಡ: 175 ಅಂಗಡಿಗಳಿರುವ ಕಟ್ಟಡದಲ್ಲಿ ಘಟನೆ*

ಪ್ರಗತಿವಾಹಿನಿ ಸುದ್ದಿ: ಹಾರ್ಡ್‌ವೇರ್ ಗೋಡೌನ್‌ಗೆ ಬೆಂಕಿ ಹೊತ್ತಿಕೊಂಡು ಧಗ ಧಗನೆ ಉರಿದಿರುಅವ್ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಚಿಕ್ಕಪೇಟೆಯ ಕುಂಬಾರಪೇಟೆ ಬಳಿ ಇರುವ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕ್ಷಣ ಕ್ಷಣಕ್ಕೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸುತ್ತಲೇ ಇದೆ.
ಮೂರು ಅಂತಸ್ತಿನ ಈ ಕಟ್ಟಡದಲ್ಲಿ ಒಟ್ಟು 175 ಅಂಗಡಿ ಮಳಿಗೆಗಳಿದ್ದವು. ಕೆಳಮಹಡಿಯಲ್ಲಿನ ಹಾರ್ಡ್‌ವೇರ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು, ಮೇಲಿನ ಅಂತಸ್ತುಗಳಿಗೆ ಬೆಂಕಿ ವ್ಯಾಪಿಸಿದೆ. ಕಟ್ಟಡದಲ್ಲಿ ಪ್ಲಾಸ್ಟಿಕ್, ಫ್ಯಾನ್ಸಿ ಸಾಮಗ್ರಿಗಳು, ಬಟ್ಟೆ ಹಾಗೂ ಸುಡುವಂತಹ ಇತರೆ ವಸ್ತುಗಳಿದ್ದ ಕಾರಣ ಬೆಂಕಿ ವೇಗವಾಗಿ ಹರಡಿದೆ. ಕಟ್ಟಡದ ತುಂಬೆಲ್ಲ ಬೆಂಕಿ ದ್ಹಗ ಧಗನೆ ಹೊತ್ತಿ ಉರಿದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಅಗ್ನಿ ಅವಘಡದಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ದಟ್ಟ ಹೊಗೆ ಆವರಿಸಿದ್ದರಿಂದ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.




