CrimeKarnataka NewsLatest

*ವೈದ್ಯನಿಂದಲೇ ಯುವತಿ ಮೇಲೆ ಅತ್ಯಾಚಾರ, ಬ್ಲ್ಯಾಕ್ ಮೇಲ್*

ಪ್ರಗತಿವಾಹಿನಿ ಸುದ್ದಿ: ವೈದ್ಯನೊಬ್ಬ ಯುವತಿ ಮೇಲೆ ಪೆಪ್ಪರ್ ಸ್ಪ್ರೇ ಮಾಡಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ವೆಸಗಿರುವ ಘಟನೆ ನಡೆದಿದೆ. ಅಲ್ಲದೇ ಯುವತಿಯ ಬೆತ್ತಲೆ ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ವೆಸಗಿರುವ ಆರೋಪ ಕೇಳಿಬಂದಿದೆ.

ಬೆಂಗಳೂರಿನ ಕೋಡಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವಿಖ್ಯಾತ್ ಡಯಾಗ್ನೋಸ್ಟಿಕ್ ವೈದ್ಯ ಡಾ.ಯುವರಾಜ್ ಮನೋಹರ್ ಯುವತಿ ಮೇಲೆ ಅತ್ಯಾಚಾರವೆಸಗಿ, ಬ್ಲ್ಯಾಕ್ ಮೇಲ್ ಮಾಡಿರುವ ವೈದ್ಯ. ಯುವತಿ ನೀಡಿದ ದೂರಿನ ಮೇರೆಗೆ ಕೋಡಿಗೆಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Home add -Advt

ಡಯಾಗ್ನೋಸ್ಟಿಕ್ ಸೆಂಟರ್ ನಲ್ಲಿ ನರ್ಸ್ ಆಗಿದ್ದ ಯುವತಿಯನ್ನು ಫೈಲ್ ಹುಡುಕಿ ಕೊಡು ಎಂದು ನೆಪ ಹೇಳಿ ಕಾಮುಕ ವೈದ್ಯ ಕರೆದಿದ್ದಾನೆ. ಈ ವೇಳೆ ಯುವತಿ ಮೇಲೆ ಪೆಪ್ಪರ್ ಸ್ಪ್ರೇ ಮಾಡಿ, ಯುವತಿಯ ಪ್ರಜ್ಞೆ ತಪ್ಪಿಸಿ ಅತ್ಯಾಚಾರವೆಸಗಿದ್ದಾನೆ.

ಯುವತಿಯ ಬೆತ್ತಲೆ ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ಕಳೆದ ಒಂದು ವರ್ಷದಿಂದ ಯುವತಿ ಇದ್ದ ಬಾಡಿಗೆ ಮನೆಗೆ ಬಂದು ವೈದ್ಯ ಯುವರಾಜ್ ಮನೋಹರ್ ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರವೆಸಗಿದ್ದಾನೆ. ಅಲ್ಲದೇ ಮದುವೆಯಾಗುವುದಾಗಿ ಭರವಸೆ ನೀಡಿದ್ದನಂತೆ. ಆಕ್ಷೇಪ ವ್ಯಕ್ತಪಡಿಸಿದರೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಅಲ್ಲದೇ ಇತ್ತೀಚೆಗೆ ಕೆಲಸದಿಂದಲೂ ಆಕೆಯನ್ನು ತೆಗೆದು ಹಾಕಿದ್ದನಂತೆ. ಇದರಿಂದ ನೊಂದ ಯುವತಿ ಕೋಡಿಗೆಹಳ್ಲಿ ಠಾಣೆಯಲ್ಲಿ ದೂರು ನೀಡಿದ್ದಾರೆ.

Related Articles

Back to top button