Kannada NewsKarnataka NewsLatest

*ತಾಯಿ-ಮಗು ಬಲಿ ಪ್ರಕರಣ; ಐವರು ಬೆಸ್ಕಾಂ ಅಧಿಕಾರಿಗಳು ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಐವರು ಬೆಸ್ಕಾಂ ಅಧಿಕಾರಿಗಳನ್ನು ಬಿಡುಗಡೆ ಮಾಡಲಾಗಿದೆ.

ನಿನ್ನೆ ಮುಂಜಾನೆ ವೈಟ್ ಫೀಲ್ಡ್ ನ ಕಾಡುಗೋಡಿಯಲ್ಲಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಸೌಂದರ್ಯ ಹಾಗೂ ಆಕೆಯ ಮಗಳು 9 ತಿಂಗಳ ಲೀಲಾ, ವಿದ್ಯುತ್ ತಂತಿ ತುಳಿದು ಸಜೀವ ದಹನಗೊಂಡಿದ್ದರು. ಸೌಂದರ್ಯ ಪತಿ ಗಂಭಿರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

Home add -Advt

ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷವೇ ದುರಂತಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಕಾಡುಗೋಡಿ ಪೊಲೀಸರು ಐವರು ಅಧಿಕಾರಿಗಳನ್ನು ಬಂಧಿಸಿದ್ದರು. ಪ್ರಕರಣ ಸಂಬಂಧ ಐವರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇದೀಗ ಬಂಧಿತ ಐವರು ಅಧಿಕಾರಿಗಳನ್ನು ಕಾಡುಗೋಡಿ ಠಾಣೆ ಪೊಲೀಸರು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ.


Related Articles

Back to top button