CrimeKarnataka NewsLatest

*ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು; ಇನ್ನಿಬ್ಬರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಸಾಲಗಾರರ ಕಾಟಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಮೃತಪಟ್ಟಿದ್ದರೆ, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯ ಮಲ್ಲೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಆಶಾ ಹಾಗೂ ವರ್ಷಿತಾ ಮೃತರು. ಮೋಹನ್, ಮಯಾಂಕ್ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಆತ್ಮಹತ್ಯೆಗೂ ಮುನ್ನ ಮೋಹನ್ ಸಾಲಗಾರರ ಕಾಟಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿಡಿಯೋ ಮಾಡಿದ್ದರು. ಬಳಿಕ ಅದನ್ನು ತನ್ನ ಸಂಬಂಧಿಕರಿಗೆ ಕಳುಹಿಸಿದ್ದಾರೆ. ಆ ಬಳಿಕ ಮೋಹನ್ ತನ್ನ ತಾಯಿ ಆಶಾ ಹಾಗೂ ಅಕ್ಕ ವರ್ಷಿತಾ ಹಾಗೂ ಅಕ್ಕನ ಮಗ ಮಯಾಂಕ್ ಕತ್ತು ಸೀಳಿ ಬಳಿಕ ತಾನೂ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನೆಯಲ್ಲಿ ತಾಯಿ ಹಾಗೂ ಅಕ್ಕ ಇಬ್ಬರು ಸಾವನ್ನಪ್ಪಿದ್ದಾರೆ.

Home add -Advt

ವಿಡಿಯೋ ನೋಡಿ ಸಂಬಂಧಿಕರು ಮನೆಗೆ ಬಂದು ನೋಡುವಷ್ಟರಲ್ಲಿ ಘಟನೆ ನಡೆದಿತ್ತು. ಗಂಭಿರ ಸ್ಥಿತಿಯಲ್ಲಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ ಪಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button