Kannada NewsKarnataka NewsLatest

*ಮತ್ತೊಂದು ಬೆಂಕಿ ಅವಘಡ; ಹೊತ್ತಿ ಉರಿದ ಎರಡು ಅಂತಸ್ತಿನ ಕಟ್ಟಡ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಎರಡು ಅಂತಸ್ತಿನ ಕಟ್ಟಡಗಳು ಹೊತ್ತಿ ಉರಿದಿದೆ. ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Home add -Advt

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಕಟ್ಟಡದಲ್ಲಿ ಸಿಲುಕಿದ್ದ ಓರ್ವ ಯುವಕನನ್ನು ರಕ್ಷಿಸಿದ್ದಾರೆ.

ಕಟ್ಟಡದಲ್ಲಿ ಪೇಂಟಿಂಗ್, ಬ್ಯಾಗ್ ಅಂಗಡಿಗಳಿದ್ದು ಸಂಪೂರ್ಣ ಬೆಂಕಿಗಾಹುತಿಯಾಗಿವೆ. 30 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.

ಆರಂಭದಲ್ಲಿ ಬೆಂಕಿ ಪೇಂಟ್ ಅಂಗಡಿಯಲ್ಲಿ ಕಾಣಿಸಿಕೊಂಡಿದ್ದು, ಬಳಿಕ ಎರಡನೇ ಮಹಡಿಗೂ ವ್ಯಾಪಿಸಿದೆ. ನಾಲ್ಕು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಬ್ಬೆಂಕಿ ನಂದಿಸಿದ್ದಾರೆ.

https://pragativahini.com/nigama-mandalilist32-mlas/

Related Articles

Back to top button