Kannada NewsKarnataka NewsLatest

*ಪ್ರಧಾನಿ ಮೋದಿ ತೆರಳುವ ರಸ್ತೆ ಬಳಿ ಜಿಲೆಟಿನ್ ಕಡ್ದಿಗಳು ಪತ್ತೆ: ಓರ್ವ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದು, ಪ್ರಧಾನಿ ಮೋದಿಯವರು ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಬೆಂಗಳೂರಿನ ಕನಕಪುರ ರಸ್ತೆಯಲ್ಲಿನ ಕಗ್ಗಲಿಪುರ-ತಾತಗುಣಿ ರಸ್ತೆ ಬಳಿ ಜಿಲೆಟಿನ್ ಕಡ್ದಿಗಳು ಪತ್ತೆಯಾಗಿವೆ. ಪ್ರಕರಣ ಸಂಬಂಧ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ನಿಗೂಢ ಸ್ಥಳದಲ್ಲಿ ಆತನ ವಿಚಾರಣೆ ನಡೆಸಿದ್ದಾರೆ.

ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಆರ್ಟ್ ಆಫ್ ಲಿವಿಂಗ್ ನ 47ನೇ ವಾರ್ಷಿಕ ಕಾರ್ಯಕ್ರಮ ಹಾಗೂ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನಾಚರಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಗೆ ಭೇಟಿ ನೀಡಿದ್ದು, ರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದೇ ವೇಳೆ ಅವರು ಸಂಚರಿಸುವ ಮಾರ್ಗದ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ.

ಪ್ರಧಾನಿ ಮೋದಿ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳಬೇಕಾಗಿತ್ತು. ಮಧ್ಯಾಹ್ನ 1:30ಕ್ಕೆ ಆರ್ಟ್ ಆಫ್ ಲಿವಿಂಗ್ ನಿಂದ ಹೆಚ್ ಎ ಎಲ್ ಗೆ ತೆರಳಿ ಅಲ್ಲಿಂದ ಹೈದರಾಬಾದ್ ಗೆ ಪ್ರಯಾಣ ಬೆಳೆಸಬೇಕಾಗಿತ್ತು. ಆದರೆ ತಾತಗುಣಿ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಕಾರಣಕ್ಕೆ ಪ್ರಧಾನಿ ಮೋದಿಯವರ ಪ್ರಯಾಣ ವಿಳಂಬವಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button