Karnataka News

*ಶ್ರದ್ಧಾ ವಾಕರ್ ಮಾದರಿಯಲ್ಲಿಯೇ ಬೆಂಗಳೂರಿನಲ್ಲಿ ಯುವತಿಯ ಬರ್ಬರ ಹತ್ಯೆ: ದೇಹವನ್ನು ಪೀಸ್ ಪೀಸ್ ಮಾಡಿ ಫ್ರಿಜ್ ನಲ್ಲಿಟ್ಟು ಎಸ್ಕೇಪ್ ಆದ ಆರೋಪಿ*

ಪ್ರಗತಿವಾಹಿನಿ ಸುದ್ದಿ: ದೆಹಲಿಯಲ್ಲಿ ಶ್ರದ್ಧಾ ವಾಕರ್ ಎಂಬ ಯುವತಿಯನ್ನು ಆಕೆಯ ಪ್ರಿಯತಮನೇ ಬರ್ಬರವಾಗಿ ಹತ್ಯೆ ನಡೆಸಿ ದೇಹವನ್ನು ತುಂಡು ತುಂಡು ಮಾಡಿ ಫ್ರಿಜ್ ನಲ್ಲಿ ಇಟ್ಟಿದ್ದ ಘಟನೆ ಇಡೀ ರಾಷ್ಟ್ರವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಅಂಥದ್ದೇ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದ್ದು, ಜನರನ್ನು ಆತಂಕಕ್ಕೀಡುಮಾಡಿದೆ.

ಬೆಂಗಳೂರಿನ ವಯ್ಯಾಲಿಕಾವಲ್ ನಲ್ಲಿ ಯುವತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ದೇಹವನ್ನು ಪೀಸ್ ಪೀಸ್ ಮಾಡಿ ಫ್ರಿಜ್ ನಲ್ಲಿ ಇಡಲಾಗಿದೆ. ಅಕ್ಕಪಕ್ಕದವರ ಮಾಹಿತಿ ಮೇರೆಗೆ ವಯ್ಯಾಲಿ ಕಾವಲ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಸುಮಾರು 25ರಿಂದ 26 ವರ್ಷದ ಯುವತಿಯನ್ನು ಕೊಲೆಗೈದು, ತುಂಡು ತುಂಡಾಗಿ ಕತ್ತರಿಸಿ ಫ್ರಿಜ್ ನಲ್ಲಿಟ್ಟು ಆರೋಪಿ ಎಸ್ಕೇಪ್ ಆಗಿದ್ದಾನೆ. ಯುವತಿ ಗುರುತು ಪತ್ತೆಯಾಗಿಲ್ಲ. ಆದರೆ ಮೃತ ಯುವತಿ ಹೊರರಾಜ್ಯದವಳು ಎಂದು ಹೇಳಲಾಗುತ್ತಿದೆ. 10ರಿಂದ 15 ದಿನಗಳ ಹಿಂದೆಯೇ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button