*ಗುಡುಗು ಸಹಿತ ಭಾರಿ ಮಳೆ: ರಾಜ್ಯ ರಾಜಧಾನಿಯಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ; ಜನಜೀವನ ಸಂಪೂರ್ಣ ಅಸ್ತವ್ಯಸ್ತ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯಕ್ಕೆ ಮಳೆ ಆರ್ಭಟ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಸಂಜೆಯಾಗುತ್ತಿದ್ದಂತೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು ಮಹಾನಗರಿಯಾದ್ಯಂತ ಮತ್ತೆ ಅವಾಂತರಗಳು ಸೃಷ್ಟಿಯಾಗಿವೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಮತ್ತೆ ರಾಜಧಾನಿಯ ರಸ್ತೆಗಳು ಜಲಾವೃತಗೊಂಡು ಹೊಳೆಯಂತೆ ಹರಿಯುತ್ತಿವೆ. ತಗ್ಗು ಪ್ರದೇಶಗಳಿಗೆ, ಮನೆಗಳಿಗೆ ನೀರು ನುಗ್ಗಿದ್ದು, ಜನರು ಸಂಕಷ್ಟಕ್ಕೀಡಾಗಿದ್ದಾರೆ. ಭಾರಿ ಮಳೆಯಿಂದಾಗಿ ಚರಂಡಿ, ರಾಜಕಾಲುವೆ ನೀರು ರಸ್ತೆಯ ಮೇಲೆ ಬೋರ್ಗರೆದು ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಹಲವೆಡೆ ವಾಹನಗಳು ನೀರಿನಲ್ಲಿ ಮುಳುಗಡೆಯಾಗಿವೆ. ಇನ್ನು … Continue reading *ಗುಡುಗು ಸಹಿತ ಭಾರಿ ಮಳೆ: ರಾಜ್ಯ ರಾಜಧಾನಿಯಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ; ಜನಜೀವನ ಸಂಪೂರ್ಣ ಅಸ್ತವ್ಯಸ್ತ*