Karnataka News

*ಬಿರುಗಾಳಿ ಸಹಿತ ದಿಢೀರ್ ಆಗಿ ಸುರಿದ ಭಾರಿ ಮಳೆ; ಹಬ್ಬದ ಸಂಭ್ರಮಕ್ಕೆ ತಣ್ಣೀರೆರಚಿದ ಮಳೆರಾಯ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಹಬ್ಬದ ಸಂಭ್ರಮಕ್ಕೆ ತಣ್ಣೀರೆರಚಿದಂತಾಗಿದೆ.

ರಾತ್ರಿ 8:30ರಿಂದ ಇದ್ದಕ್ಕಿದ್ದಂತೆ ಬೆಂಗಳೂರಿನಾದ್ಯಂತ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಮನೆಗಳಿಗೆ ನೀರು ನುಗ್ಗಿದ್ದು, ಅವಾಂತರಗಳು ಸೃಷ್ಟಿಯಾಗಿವೆ.

Home add -Advt

ಕಳೆದ ಕೆಲ ದಿನಗಳಿಂದ ತಣ್ಣಗಾಗಿದ್ದ ಮಳೆರಾಯ ನಿನ್ನೆ ಕೆಲ ಕಾಲ ಅಬ್ಬರಿಸಿ ಸುಮ್ಮನಾಗಿದ್ದ, ಇಂದು ಮತ್ತೆ ವರುಣಾರ್ಭಟ ಜೋರಾಗಿದ್ದು, ಬೆಂಗಳೂರಿಗರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಸ್ತೆ ಕಾಮಗಾರಿ, ಚರಂಡಿ ದುರಸ್ತಿಗೆಂದು ಹಲವೆಡೆ ಕಾಮಗಾರಿ ನಡೆಯುತ್ತಿದ್ದು, ಭಾರಿ ಮಳೆಯಿಂದಾಗಿ ಮತ್ತೆ ಬೆಂಗಳೂರಿನಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ಸುತ್ತಮುತ್ತ ಪ್ರದೇಶಗಳಲ್ಲಿಯೂ ಧಾರಾಕಾರ ಮಳೆಯಾಗುತ್ತಿದೆ.


Related Articles

Back to top button