
IT ದಾಳಿ ವೇಳೆ ಅಧಿಕಾರಿಗಳೇ ಶಾಕ್
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನ ಎರಡು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಬರೋಬ್ಬರಿ 40 ಕೋಟಿ ರೂಪಾಯಿಗಳನ್ನು ವಶಕ್ಕೆ ಪಡೆದಿದ್ದಾರೆ.
ಆರ್.ಟಿ.ನಗರದ ಎರಡು ಫ್ಲಾಟ್ ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಮಾಜಿ ಕಾರ್ಪೊರೇಟರ್ ಅಶ್ವತ್ಥಮ್ಮ ಅವರ ಬಾಮೈದ ಪ್ರದೀಪ್ ಎಂಬುವವರಿಗೆ ಸೇರಿದ ಫ್ಲಾಟ್ ಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳಿಗೆ ಬಾಕ್ಸ್ ಗಳಲ್ಲಿ ಕಂಡ ಕಂತೆ ಕಂತೆ ಹಣವನ್ನು ನೋಡಿ ಶಾಕ್ ಆಗಿದ್ದಾರೆ.
ಬೆಡ್ ರೂಮ್ ನ ಮಂಚದ ಕೆಳಗೆ 23 ಬಾಕ್ಸ್ ಗಳಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ. ಬರೋಬ್ಬರಿ 40 ಕೋಟಿ ರೂಪಾಯಿ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪ್ರದೀಪ್ ಎಂಬುವವರನ್ನು ವಶಕ್ಕೆ ಪಡೆದು ವಿಚರಣೆ ನಡೆಸಿದ್ದಾರೆ.
ಐಟಿ ದಾಳಿ ಮುಂದುವರೆದಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ