Latest

ಹಾಸ್ಟೇಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಎಂಜಿನಿಯರಿಂಗ್ ವಿದ್ಯಾರ್ಥಿನಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳು ಕಾಲೇಜು ಹಾಸ್ಟೇಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಕೆಂಗೇರಿ ಬಳಿ ನಡೆದಿದೆ.

21 ವರ್ಷದ ಶಿವಾನಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಜೆ.ಎಸ್.ಎಸ್ ಕಾಲೇಜಿನ ಎಂಜಿನಿಯರಿಂಗ್ ವಿಭಾಗದ ಹಾಸ್ಟೇಲ್ ರೂಮಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಕೊರಳೊಡ್ಡಿದ್ದಾಳೆ.

ಇಂದು ಕಾಲೇಜಿನಲ್ಲಿ ಪರೀಕ್ಷೆ ಇದ್ದು, ಪರೀಕ್ಷೆಗೆ ಹಾಜರಾಗದೇ ಹಾಸ್ಟೇಲ್ ನಲ್ಲಿಯೇ ಇದ್ದ ಶಿವಾನಿ, ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಾರ್ಡನ್ ಹಾಸ್ಟೇಲ್ ರೂಮಿಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ತಕ್ಷಣ ವಾರ್ಡನ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೆಂಗೇರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಆಂಬುಲೆನ್ಸ್ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ

Related Articles

Back to top button