
ಪ್ರಗತಿವಾಹಿನಿ ಸುದ್ದಿ: ಹಿಂಗಾರು ಮಳೆ ಅಬ್ಬರ ರಾಜ್ಯದಲ್ಲಿ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನವೆಂಬರ್ 9ರ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಇನ್ನು ಇಂದಿನಿಇಂದ ಎರಡು ದಿನಗಳ ಕಾಲ 15 ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ನವೆಂಬರ್ 9ರ ಬಳಿಕ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ರಾಯಚೂರು, ಧಾರವಾಡ, ಹಾವೇರಿ, ಯಾದಗಿರಿ, ವಿಜಯನಗರ, ಬೆಂಗಳೂರು ಗ್ರಾಮಂತರ, ಬೆಂಗಳೂರು ನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಚಾಮರಾಜನಗರ, ದಾವಣಗೆರೆ, ಹಾಸನ, ತುಮಕೂರು, ಮಂಡ್ಯ, ಮೈಸೂರು, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ