
ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನ 19ನೇ ಮಹಡಿಯಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಮಾದವನಗರದಲ್ಲಿರುವ ಪ್ರತಿಷ್ಠಿತ ಹೋಟೆಲ್ ಇದಾಗಿದ್ದು, ಹೋಎಲ್ ನ 19ನೇ ಮಹದಿಯಿಂದ ವ್ಯಕ್ತಿ ಕೆಳಗೆ ಬಿದ್ದಾರೆ. ಇದು ಆತ್ಮಹತ್ಯೆಯೋ? ಅಥವಾ ಕೊಲೆಯೋ ಎಂಬುದು ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ.
ಮೃತ ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ