*ಹೋಟೆಲ್ ನ 19ನೇ ಮಹಡಿಯಿಂದ ಬಿದ್ದು ವ್ಯಕ್ತಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನ 19ನೇ ಮಹಡಿಯಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಮಾದವನಗರದಲ್ಲಿರುವ ಪ್ರತಿಷ್ಠಿತ ಹೋಟೆಲ್ ಇದಾಗಿದ್ದು, ಹೋಎಲ್ ನ 19ನೇ ಮಹದಿಯಿಂದ ವ್ಯಕ್ತಿ ಕೆಳಗೆ ಬಿದ್ದಾರೆ. ಇದು ಆತ್ಮಹತ್ಯೆಯೋ? ಅಥವಾ ಕೊಲೆಯೋ ಎಂಬುದು ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ. ಮೃತ ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. *ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ*