National

*ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ: ಮೂವರು ಸಜೀವ ದಹನ*

ಪ್ರಗತಿವಾಹಿನಿ ಸುದ್ದಿ: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಮೃತಪಟ್ಟ ಘಟನೆ ಮುಂಬೈನ ಲೋಖಂಡವಾಲಾ ಕಾಂಪ್ಲೆಕ್ಸ್‌ನ ಅಂಧೇರಿ ವೆಸ್ಟ್‌ನಲ್ಲಿ ನಡೆದಿದೆ.

ಮೃತರನ್ನು ಚಂದ್ರಪ್ರಕಾಶ್ ಸೋನಿ (74), ಕಾಂತಾ ಸೋನಿ (74) ಮತ್ತು ಪೆಲುಬೇಟ (42) ಎಂದು ಗುರುತಿಸಲಾಗಿದೆ. ಈ ಬಗ್ಗೆ ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮಾಹಿತಿ ನೀಡಿದೆ. ಬೆಂಕಿ ದೊಡ್ಡದಾಗಿ ಕಾಣಿಸಿಕೊಂಡಿಲ್ಲ. ಆದರೂ ಕಟ್ಟಡ 10ನೇ ಮಹಡಿಯಲ್ಲಿರುವ ಅಪಾರ್ಟ್‌ಮೆಂಟ್‌ಗೆ ಬೆಂಕಿ ಆವರಿಸಿತ್ತು.

Home add -Advt

ಘಟನೆಯಲ್ಲಿ ಗಾಯಗೊಂಡ ಇಬ್ಬರು ಹಿರಿಯ ನಾಗರಿಕರು ಸೇರಿದಂತೆ ಮೂವರು ನಿವಾಸಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಗಾಯಾಳುಗಳು ಆಸ್ಪತ್ರೆಗೆ ಬರುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಘಟನೆಯ ಹಿನ್ನೆಲೆಯಲ್ಲಿ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ 1 ಗಂಟೆಯಲ್ಲಿ ಬೆಂಕಿ ನಂದಿಸಿದ್ದಾರೆ.

Related Articles

Back to top button