ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ಬಾಂಬ್ ಬೆದರಿಕೆ ಕರೆಗಳು ಬರುತ್ತಿದ್ದು, ಶಾಲೆಗಳು, ವಿಶ್ವೇಶ್ವರಯ್ಯ ಮ್ಯೂಸಿಯಂ ಬಳಿಕ ಇದೀಗ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ ಹಾಕಲಾಗಿದೆ.
ಮುಂಬೈನ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಕರೆ ಮಾಡಿ ಬೆಂಗಳೂರು ಸ್ಟಾಕ್ ಎಕ್ಸ್ ಚೇಂಜ್ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಆರೋಪಿಗಳು ಹೇಳಿದ್ದಾರೆ. ಮುಂಬೈ ಎನ್ ಎಸ್ ಇ ಕಚೇರಿ ಅಧಿಕಾರಿಗಳು ವಿಧಾನಸೌಧ ಠಾಣೆ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.
ಕೂಡಲೇ ಪೊಲೀಸರು ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ