ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇತ್ತೀಚೆಗೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬೆಂಗಳೂರು ಹಾಗೂ ಮಹಾರಾಷ್ಟ್ರದಲ್ಲಿ ದಾಳಿ ನಡೆಸಿದ್ದರು. ಬೆಂಗಳೂರಿನಲ್ಲಿ ನಡೆದ ದಾಳಿಯಲ್ಲಿ ಓರ್ವ ಶಂಕಿತ ಉಗ್ರನನ್ನು ಬಂಧಿಸಲಾಗಿತ್ತು. ಇದರ ಬೆನ್ನಲ್ಲೇ ಈಗ ಬೆಂಗಳೂರಿನಲ್ಲಿ ಇಂದು 12ಕ್ಕೂ ಹೆಚ್ಚು ಕಡೆಗಳಲ್ಲಿ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಿಂದಿನ ದಾಳಿಯಲ್ಲಿ ಶಂಕಿತ ಉಗ್ರ ಅಬ್ಬಾಸ್ ಅಲಿ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದರು. ಆತ ಐಸಿಸ್ ಜೊತೆ ನಂಟು ಹೊಂದಿದ್ದಾನೆ ಎಂಬ ಶಂಕೆ ಮೇರೆಗೆ ಆತನನ್ನು ಬಂಧಿಸಿ ತನಿಖೆಗೆ ಒಳಪಡಿಸಲಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಬೆಂಗಳೂರಿನ 12 ವಿವಿಧ ಸ್ಥಳಗಳಲ್ಲಿ ಎನ್ ಐ ಎ ದಾಳಿ ನಡೆಸಿ, ಪರಿಶೀಲನೆ ನಡೆಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ