ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಚಿರತೆ ಕಾಟ ಶುರುವಾಗಿದ್ದು, ಚಿರತೆ ಸೆರೆ ಕಾರ್ಯಾಚಾರಣೆಗೆ ಮುಂದಾಗಿದ್ದ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಯ ಮೇಲೆಯೇ ಚಿರತೆ ದಾಳಿ ಮಾಡಿದೆ.
ಬೆಂಗಳೂರಿನ ಬೊಮ್ಮನಹಳ್ಳಿಯ ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದ ಕಟ್ಟಡವೊಂದರಲ್ಲಿ ಅವಿತು ಕುಳಿತಿದ್ದ ಚಿರತೆ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಚಿರತೆ ಸೆರೆ ಹಿಡಿಯಲು ಅರವಳಿಕೆ ಚುಚ್ಚು ಮದ್ದು ನೀಡಲು ಮುಂದಾಗಿದ್ದ ಡಾ.ಕಿರಣ್ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿದೆ.
ಕಿರಣ್ ಅವರ ಕೈ ಹಾಗೂ ಕತ್ತಿನ ಭಾಗದಲ್ಲಿ ಚಿರತೆ ಪರಚಿದ್ದು, ತಕ್ಷಣ ಅವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಧ್ಯ ಚಿರತೆ ಕಟ್ಟಡದ ಬೇಸ್ ಮೆಂಟ್ ನಲ್ಲಿ ಅಡಗಿ ಕುಳಿತಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ