ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನ ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಬೆಂಗಳೂರಿನ ಗೋವಿಂದಪುರದಲ್ಲಿರುವ ಶಾಲೆಗೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ವಿದ್ಯಾರ್ಥಿಗಳು, ಶಿಕ್ಷಕರು, ಶಾಲಾ ಸಿಬಬ್ಂದಿ ಆತಂಕಕ್ಕೊಳಗಾಗಿದ್ದಾರೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಗೋವಿಂದಪುರದಲ್ಲಿರುವ ಇಂಡಿಯನ್ ಪಬ್ಲಿಕ್ ಸ್ಕೂಲ್ ಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಮಧ್ಯಾಹ್ನ 1:30ಕ್ಕೆ ಬಾಂಬ್ ಸ್ಫೊಟಗೊಳ್ಳಲಿದೆ ಎಂದು ಸಂದೇಶ ರವಾನಿಸಲಾಗಿದೆ. ಶಾಲೆಯ ಆವರಣದಲ್ಲಿ 5 ಪೈಪ್ ಲೈನ್ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಬಂದಿದೆ.
ಫಾದರ್ ಕೊಡಚಿ ಹೆಸರಿನ ಇ-ಮೇಲ್ ಮೂಲಕ ಸಂದೇಶ ಬಂದಿದ್ದು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ತೆರಳಿ ಶಾಲೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಇದೊಂದು ಹುಸಿ ಬಂಬ್ ಬೆದರಿಕೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ