Kannada NewsKarnataka NewsLatest

*ಖಾಸಗಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ*

ಪ್ರಗತಿವಾಹಿನಿ ಸುದ್ದಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಖಾಸಗಿ ಶಾಲೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.

ಬೆಂಗಳೂರಿನ ಜ್ಞಾನ ಭಾರತಿ ಠಾಣಾ ವ್ಯಾಪ್ತಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿರುವ ಖಾಸಗಿ ಕೌಶಲ್ಯ ಶಾಲೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡ ಧಗ ಧಗನೆ ಹೊತ್ತಿ ಉರಿದಿದೆ.

ಶಾಲೆಯ ಆಡಿಟೋರಿಯಂನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಇಂದು ಶಾಲೆಗೆ ರಜೆ ಇದ್ದಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ಮಕ್ಕಳಿಗೆ ತೊಂದರೆ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜ್ಞಾನಭಾರತಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button