Kannada NewsKarnataka NewsLatest

*DCP ಕಚೇರಿ ಎದುರೇ ಯುವತಿಗೆ ಲೈಂಗಿಕ ದೌರ್ಜನ್ಯ; ಕಾಮುಕ ಅರೆಸ್ಟ್*

ಬೆಂಗಳೂರು: ಬೆಂಗಳೂರು ದಕ್ಷಿಣ ಡಿಸಿಪಿ ಕಚೇರಿ ಮುಂದೆಯೇ ಯುವತಿಗೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯವೆಸಗಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ನವೆಂಬರ್ 6ರಂದು ಡಿಸಿಪಿ ಕಚೇರಿ ಮುಂದೆ ರಸ್ತೆಯಲ್ಲಿ ಬರುತ್ತಿದ್ದ ಯುವತಿಯ ಬಟ್ಟೆ ಎಳೆದಾಡಿದ್ದ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದ. ಈ ಸಂಬಂಧ ಯುವತಿ ಜಯನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Home add -Advt

ಆರೋಪಿ ಬಂಧನಕ್ಕಾಗಿ ಪೊಲೀಸರು 500 ಸಿಸಿಟಿವಿ ಕ್ಯಾಮರಾ ಪರುಶೀಲನೆ ನಡೆಸಿದ್ದರು. ಇದೀಗ ಆರೋಪಿ ಪತ್ತೆಯಾಗಿದ್ದು, ಹರೀಶ್ ಎಂಬಾತನನ್ನು ಬಂಧಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button