Kannada NewsKarnataka NewsLatest

*ರಾಜಧಾನಿಯಲ್ಲಿ ಮತ್ತೊಂದು ಅಗ್ನಿ ಅವಘಡ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಎಲೆಕ್ಟ್ರಾನಿಕ್ ವಸ್ತುಗಳ ಗೋಡೌನ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಕುಂಬಾರ ಪೇಟೆಯ ಎಸ್ ಪಿ ರೊಡ್ ನಲ್ಲಿ ನಡೆದಿದೆ.

ಕಟ್ಟಡದ ಮೂರನೇ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಕೆಲ ಹೊತ್ತಲ್ಲೇ 4 ಹಾಗೂ 5ನೇ ಮಹಡಿಗೂ ವ್ಯಾಪಿಸಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಮೂರು ಮಹಡಿಗಳು ಹೊತ್ತಿ ಉರಿದಿವೆ.

Home add -Advt

ಘಟನೆ ನಡೆದು ಒಂದು ಗಂಟೆಯಾದರೂ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿಲ್ಲ. ಬಳಿಕ ತಡವಾಗಿ ಬಂದ ಅಗ್ನಿಶಾಮಕ ಸಿಬ್ಬಂದಿಗಳು ನೀರು ಖಾಲಿಯಾಗಿದೆ ಎಂದು ಹೇಳಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳ ವರ್ತನೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಕಿಯ ತೀವ್ರತೆಗೆ ಕಟ್ಟಡ ಬಿರುಕು ಬಿಟ್ಟಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದವರು ಹರಸಾಹಸ ಪಡುತ್ತಿದ್ದಾರೆ.

Related Articles

Back to top button