Kannada NewsKarnataka NewsLatest

*ನೇಣುಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಶವ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

27 ವರ್ಷದ ರಂಜಿತಾ ಮೃತ ಶಿಕ್ಷಕಿ. ಮಗಳನ್ನು ಕೊಲೆ ಮಾಡಲಾಗಿದೆ ಎಂದು ರಂಜಿತಾ ಪೋಷಕರು ದೂರು ನೀಡಿದ್ದಾರೆ.

Related Articles

ರಂಜಿತಾ ಪತಿ ಮಧು ಹಾಗೂ ಆತನ ಕುಟುಂಬ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ರಂಜಿತಾ ಮಂಡ್ಯ ಜಿಲ್ಲೆಯ ನಾಗಮಂಗಲದ ಮೂಲದವರಾಗಿದ್ದು, ಐದು ವರ್ಷದ ಹಿಂದೆ ಮಧು ಎಂಬುವವರನ್ನು ವಿವಾಹವಾಗಿದ್ದರು. ದಂಪತಿಗೆ ಮೂರು ವರ್ಷದ ಹೆಣ್ಣು ಮಗುವಿದೆ.

ಪತಿ ಮಧು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಇನ್ನು ಪತ್ನಿರಂಜಿತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿ ಆಗಿದ್ದರು. ಇದೀಗ ರಂಜಿತಾ ಶವ ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

Home add -Advt


Related Articles

Back to top button