CrimeLatestNational

*ಅಪಾರ್ಟ್ ಮೆಂಟ್ ನ 30ನೇ ಮಹಡಿಯಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಸ್ನೇಹಿತನನ್ನು ನೋಡಲೇಂದು ಬಂದು ಅಪಾರ್ಟ್ಮೆಂಟ್‌ನ 30ನೇ ಮಹಡಿಯಿಂದ ಜಿಗಿದು ಸಾಫ್ಟ್ ವೇರ್ ಇಂಜಿನಿಯರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಭರತ್ (29) ಆತ್ಮಹತ್ಯೆಗೆ ಶರಣಾದ ಟೆಕ್ಕಿ. ಬೆಂಗಳೂರು ಮೂಲದ ಭರತ್ ಹೈದರಾಬಾದ್ ನ ಅಪಾರ್ಟ್ ಮೆಂಟ್ ನಿಂದ ಜಿಗಿದು ಸಾವಿಗೆ ಶರಣಾಗಿದ್ದಾನೆ. ಹೈದರಾಬಾದ್ ನ ನಾನಕ್‌ರಾಮ್‌ಗುಡ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದ ಭರತ್, ಸ್ನೇಹಿತನನ್ನು ಭೇಟಿಯಾಗಲು ಹೈದರಾಬಾದ್‌ಗೆ ಬಂದಿದ್ದರು. ಹೀಗಾಗಿ ಸ್ನೇಹಿತ ಫ್ಲ್ಯಾಟ್‌ನಲ್ಲಿಯೇ ಉಳಿದುಕೊಂಡಿದ್ದರು. ರಾತ್ರಿ ಅಪಾರ್ಟ್ಮೆಂಟ್‌ನ 30ನೇ ಮಹಡಿಯಿಂದಿ ಜಿಗಿದಿದ್ದು, ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ವಾಹನದ ಮೇಲೆ ಬಿದ್ದು ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಭರತ್ ಬರೆದಿದ್ದಾನೆ ಎನ್ನಲಾದ ಡೆತ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿ ತಂದೆ, ತಾಯಿಗೆ ಕ್ಷಮೆಯಾಚಿಸಿದ್ದಾನೆ. ಆದರೆ, ಸಾವಿಗೆ ನಿಖರ ಕಾರಣವೇನು ಎನ್ನುವುದು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button