ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಬೆಸ್ಕಾಂ ಸಿಬ್ಬಂದಿಯೊಬ್ಬರು ವಿದ್ಯುತ್ ಬಿಲ್ ಕೊಡುತ್ತಿದ್ದ ವೇಳೆಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಪ್ರಕಾಶ್ ಕುಮಾರ್ ಮೃತ ಬೆಸ್ಕಾಂ ಸಿಬ್ಬಂದಿ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಿದ್ದನಹಳ್ಳಿಯಲ್ಲಿ ವಿದ್ಯುತ್ ಬಿಲ್ ಕೊಡುತ್ತಿದ್ದ ವೇಳೆ ಪ್ರಕಾಶ್ ಕುಮಾರ್ ಏಕಾಏಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಬೆಸ್ಕಾಂ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ