ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು ತಂದೆ-ಮಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು ತಂದೆ ಹಾಗೂ ಮಗಳು ಇಬ್ಬರು ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಇದೀಗ ಬೆಸ್ಕಾಂ ಸಂಸ್ಥೆಯ ಸಹಾಯಕ ಅಭಿಯಂತರ ದಿನೇಶ್, ಕಿರಿಯ ಅಭಿಯಂತರ ಮಹಾಂತೇಶ್ ಅವರನ್ನು ಬಂಧಿಸಲಾಗಿದೆ.
ನಿಶ್ಚಿತಾರ್ಥಕ್ಕಾಗಿ ಹಾಲ್ ಬುಕ್ ಮಾಡಿ ಬರುತ್ತಿದ್ದಾಗ ಮಂಗನಹಳ್ಳಿಯಲ್ಲಿ ಮಾರ್ಗಮಧ್ಯೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು 55 ವರ್ಷದ ಶಿವರಾಜ್ ಹಾಗೂ ಮಗಳು 18 ವರ್ಷದ ಚೈತನ್ಯ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಬ್ಬರು ಸಾವನ್ನಪ್ಪಿದ್ದರು.
ಟ್ರಾನ್ಸ್ ಫಾರ್ಮ್ ನಲ್ಲಿ ಸಮಸ್ಯೆ ಇದೆ ಎಂದು ಸ್ಥಳೀಯರು ಹಲವು ಬಾರಿ ಬೆಸ್ಕಾಂಗೆ ಕರೆ ಮಾಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ಮೆರೆದಿದ್ದರು. ಅದಾದ ಸ್ವಲ್ಪ ಹೊತ್ತಲ್ಲೇ ಸ್ಪೋಟ ಸಂಭವಿಸಿದೆ. ದುರಂತಕ್ಕೆ ಬೆಸ್ಕಾಂ ಅದಿಕಾರಿಗಳೇ ಕಾರಣ ಎಂದು ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ರವಿ ಡಿ.ಚನ್ನಣ್ಣವರ್ ವಿರುದ್ಧ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ