ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪವರ್ ಸಪ್ಲೈ ಅಪ್ ಗ್ರೇಡ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಬೆಸ್ಕಾಂ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬಂಧಿತ ಅಧಿಕಾರಿಗಳನ್ನು ಸುಮನಹಳ್ಳಿ ಬೆಸ್ಕಾಂ ಎಇಇ ಭಾರತಿ ಹಾಗೂ ಎಇ ಕುನಾಲ್ ಕುಮಾರ್ ಎಂದು ಗುರುತಿಸಲಾಗಿದೆ. ಪವರ್ ಸಪ್ಲೈಗಾಗಿ ಅನಂತರಾಜು ಎಂಬುವವರು ಅರ್ಜಿ ಸಲ್ಲಿಸಿದ್ದರು. ಕೆಲಸ ಮಾಡಿಕೊಡಲು 25 ಸಾವಿರ ರೂಪಾಯಿ ಹಣ ನೀಡುವಂತೆ ಅಧಿಕಾರಿಗಳು ಬೇಡಿಕೆ ಇಟ್ಟಿದ್ದರು.
ಈ ಹಿನ್ನೆಲೆಯಲ್ಲಿ ಅನಂತರಾಜು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಅಧಿಕಾರಿಗಳಿಬ್ಬರೂ ಸಿಕ್ಕಿ ಬಿದ್ದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ