Kannada NewsKarnataka NewsLatest
*ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಜೆಇ*

ಪ್ರಗತಿವಾಹಿನಿ ಸುದ್ದಿ: ಲಂಚ ಪಡೆಯುತ್ತಿದ್ದಾಗಲೇ ಬೆಸ್ಕಾಂ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನ ವಿಜಯನಗರ ಕಚೇರಿಯಲ್ಲಿ ನಡೆದಿದೆ.
ಜೆಇ ಪ್ರಕಾಶ್ ಲೋಕಾಯುಕ್ತ ಬಲೆಗೆ ಬಿದ್ದವರು. ಬಹುಮಹಡಿ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು 1.5 ಲಕ್ಷ ಲಂಚ ಪಡೆಯುತ್ತಿದ್ದರು. ಈ ವೇಳೆ ಲೋಕಾಯುಕ್ತ ಅಧಿಕರಿಗಳು ದಾಳಿ ನಡೆಸಿದ್ದಾರೆ.
ವಿದ್ಯುತ್ ಸಂಪರ್ಕ ಕಲ್ಪಿಸಲು 2.5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಸ್ಕಾಂ ಜೆಇ, 1.5 ಲಕ್ಷ ಮುಂಗಡವಾಗಿ ಎಲೆಕ್ಟ್ರಿಕಲ್ ಗುತ್ತಿಗೆದಾರ ಮಂಜೇಶ್ ಎಂಬುವವರಿಂದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ