ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಈವರೆಗೆ 57 ಸಾವಿರ ವಾಹನಗಳನ್ನು ಸೀಜ್ ಮಾಡಲಾಗಿದೆ. 4 ಸಾವಿರ ಜನರನ್ನು ಬಂಧಿಸಲಾಗಿದೆ. 2 ಸಾವಿರಕ್ಕೂ ಹೆಚ್ಚು ಎಫ್ಐಆರ್ ಹಾಕಲಾಗಿದೆ. 95 ಲಕ್ಷ ರೂ. ದಂಡ ವಿಧಿಸಲಾಗಿದೆ. ಇಂದಿನಿಂದ ಲಾಕ್ ಡೌನ್ ಇನ್ನಷ್ಟು ಕಠಿಣವಾಗಿರಲಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರಿಕಾಗೋಷ್ಠಿಯಲ್ಲಿ ಈ ಎಚ್ಚರಿಕೆ ನೀಡಿದ್ದಾರೆ. ಕೇಂದ್ರದ ಎಲ್ಲ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು. ನಿಯಮ ಉಲ್ಲಂಘಿಸಿದರೆ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಹಾಗಾಗಿ ಎಲ್ಲರೂ ಪ್ರಧಾನಿ ಹೇಳಿದ ಸಪ್ತ ಸೂತ್ರಗಳನ್ನು ಪಾಲಿಸಬೇಕು ಎಂದು ವಿನಂತಿಸಿದರು.
ಮೇ 3ರ ವರೆಗೆ ಲಾಕ್ ಡೌನ್ ವಿಸ್ತರಣೆ, ಇನ್ನಷ್ಟು ಕಠಿಣ – ಮೋದಿ ಘೋಷಣೆ
ಲಾಕ್ ಡೌನ್ ಅವಧಿಯಲ್ಲಿ ಪಾಲಿಸಲು ಪ್ರಧಾನಿ ಹೇಳಿದ ಸಪ್ತ ಸೂತ್ರ ಏನು?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ