*ರೇಬಿಸ್ ಲಸಿಕೆಗಳ ಕೊರತೆಯಾಗದಂತೆ ಎಚ್ಚರ ವಹಿಸಿ: ರಾಹುಲ್ ಶಿಂಧೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಾಯಿ ಕಡಿತದಿಂದಾಗುವ ಮರಣಗಳನ್ನು ತಡೆಗಟ್ಟಲು ರೇಬಿಸ್ ಲಸಿಕೆಗಳನ್ನು ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ತುರ್ತು ಚಿಕಿತ್ಸೆ ನೀಡಲು ದಾಸ್ತಾನು ಇಟ್ಟುಕೊಂಡು ನಾಯಿ ಕಡಿತದಿಂದ ಮರಣ ಆಗದಂತೆ ಮುಂಜಾಗೃತ ಕ್ರಮ ತೆಗೆದುಕೊಳ್ಳಲು ಆರೋಗ್ಯ ಅಧಿಕಾರಿಗಳಿಗೆ ಜಿಪಂ ಸಿ.ಇ.ಒ ರಾಹುಲ್ ಶಿಂಧೆ ಸೂಚಿಸಿದರು.
ನಗರದ ಜಿ.ಪಂ ಸಭಾಂಗಣದಲ್ಲಿ ಸೋಮವಾರ (ಆ.18) ನಡೆದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಸಂಘದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ಅವರು ಮಾತನಾಡಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಭೌತಿಕ & amp; ಆರ್ಥಿಕ ಪ್ರಗತಿ ಪರಿಶೀಲನೆ ಮಾಡಿ ಕುಂಠಿತ ಪ್ರಗತಿ ಹೊಂದಿರುವ ತಾಲ್ಲೂಕಾ ಆರೋಗ್ಯ ಅಧಿಕಾರಿಗಳಿಗೆ ಪ್ರಗತಿ ಸಾಧಿಸಿ ವರದಿಯನ್ನು ಸಲ್ಲಿಸಲು ತಿಳಿಸಿದರು.
ಸಮುದಾಯ ಆರೋಗ್ಯ ಕೇಂದ್ರಗಳ ವಿಜನ್ ಸೆಂಟರ್ಗಳಲ್ಲಿ ಅರ್ಹ ಫಲಾನುಭವಿಗಳಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಕೊಳ್ಳಲು ಕಣ್ಣಿನ ತಪಾಸಣಾ ಶಿಬಿರಗಳನ್ನು ಏರ್ಪಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ರಾಷ್ಟ್ರೀಯ ಓರಲ್ ಹೆಲ್ತ್ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಸಗಿ ದಂತ ಮಾಹಾ ವಿದ್ಯಾಲಯ ಕಾಲೇಜಿನ ಸಹಯೋಗದೊಂದಿಗೆ ಮೊಬೈಲ್ ಡೆಂಟಲ್ ವ್ಯಾನಗಳನ್ನು ಬಳಿಸಿಕೊಂಡು ದಂತ ಚಿಕಿತ್ಸಾ ಶಿಬಿರಗಳನ್ನು ಹಮ್ಮಿಕೊಳ್ಳುವಂತೆ ಆರೋಗ್ಯ ಅಧಿಕಾರಿಗಳಿಗೆ ತಿಳಿಸಿದರು.
ಮಳೆಯಿಂದಾಗ ನೀರಿಗೆ ಸಂಬಂಧಿಸಿದ ಕಾಯಿಲೆಗಳು ಹೆಚ್ಚುತ್ತಿರುವುದರಿಂದ ಸಾರ್ವಜನಿಕರಿಗೆ ಕುದಿಸಿ ಆರಿಸಿ ನೀರು ಕುಡಿಯುವಂತೆ ಸಾರ್ವಜನಿಕರಿಗೆ ಮನವರಿಕೆ ಮಾಡಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು, ರಾಷ್ಟ್ರೀಯ ಲಸಿಕಾ ಕಾರ್ಯಕ್ರಮದಡಿ 0-5 ವರ್ಷದೊಳಗಿನ ಮಕ್ಕಳಿಗೆ ಲಸಿಕಾ ವೇಳಾಪಟ್ಟಿ ಪ್ರಕಾರ ಲಸಿಕೆಗಳನ್ನು ನೀಡಿ ಪ್ರಗತಿ ಕುಂಠಿತವಾಗದಂತೆ ಪ್ರಗತಿ ಸಾಧಿಸಲು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಬಸವರಾಜ ಅಡವಿಮಠ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ್, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ, ಚಿಕ್ಕೋಡಿ ಅಪರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಸ್. ಗಡೇದ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಕೇಶವ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಚಾಂದನಿ ದೆವಡಿ, ಜಿಲ್ಲಾ ಆರಿ.ಹೆಚ್ ಅಧಿಕಾರಿ ಡಾ. ಎಸ್ ಎಸ್ ಸಾಯನ್ನವರ, ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಗೀತಾ ಕಾಂಬಳೆ, ಜಿಲ್ಲಾ ರೋಗವಾಹಕ ಆಶ್ರೀತರೋಗಗಳ ನಿಯಂತ್ರಣಾ ಅಧಿಕಾರಿ ಡಾ.ವಿವೇಕ ಹೊನ್ನಳ್ಳಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಸಂಜಯ ದೊಡಮನಿ, ಹಾಗೂ ತಾಲೂಕಾ ಆರೋಗ್ಯ ಅಧಿಕಾರಿಗಳು ಮತ್ತು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.