
ಪ್ರಗತಿವಾಹಿನಿ ಸುದ್ದಿ: ಮೈದುಂಬಿ ಹರಿಯುತ್ತಿರುವ ಭದ್ರಾ ಜಲಾಶಯಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಬಾಗಿನ ಅರ್ಪಣೆ ಮಾಡಿ, ಗಂಗಾಪೂಜೆಯ ಸಮಾರಂಭವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧುಬಂಗಾರಪ್ಪ, ಭದ್ರಾವತಿಯ ಶಾಸಕ ಬಿ. ಕೆ. ಸಂಗಮೇಶ್, ಸರ್ವಧರ್ಮಗಳ ಗುರುಗಳು, ತರೀಕೆರೆ ಶಾಸಕ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು ಸೇರಿದಂತೆ ಭ್ರದ್ರಾವತಿ ಮತ್ತು ತರೀಕೆರೆ ಭಾಗದ ವಿವಿಧ ಜನ ಪ್ರತಿನಿಧಿಗಳು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಈ ಭಾಗದ ರೈತರು ಭಾಗವಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ