ಗಣೇಶೋತ್ಸವದ ಸಂಭ್ರಮದಲ್ಲಿ ದುರಂತ: ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಪ್ರಗತಿವಾಹಿನಿ ಸುದ್ದಿ: ಗಣೇಶೋತ್ಸವದ ಸಂಭ್ರಮದ ನಡುವೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ದುರಂತ ಸಂಭವಿಸಿದೆ. ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ಕೆರೆಯಲ್ಲಿ ಆಯತಪ್ಪಿ ಬಿದ್ದ 20 ವರ್ಷದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ದೇವರಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ರಾತ್ರಿಯಿಡೀ ನಡೆದ ಶೋಧ ಕಾರ್ಯದ ಬಳಿಕ ಸೋಮವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ಮೃತ ಯುವಕ ರಾಕೇಶ್ ಭದ್ರಾವತಿಯಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದರು. ಭದ್ರಾವತಿ ತಾಲೂಕಿನ ರಂಗನಾಥಪುರದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿಯ ವಿಸರ್ಜನಾ ಮೆರವಣಿಗೆಯಲ್ಲಿ ರಾಕೇಶ್‌ ಭಾಗವಹಿಸಿದ್ದರು. ಭಾನುವಾರ ಸಂಜೆ … Continue reading ಗಣೇಶೋತ್ಸವದ ಸಂಭ್ರಮದಲ್ಲಿ ದುರಂತ: ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು