ಪ್ರಗತಿ ವಾಹಿನಿ ಸುದ್ದಿ, ಬೆಳಗಾವಿ;
ಬೆಳಗಾವಿಯ ಗುರುದೇವ ರಾನಡೆ ಮಂದಿರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶಾಲಾ ಮಕ್ಕಳ ಭಗವದ್ಗೀತೆ ಕಂಠ ಪಾಟ ಸ್ಪರ್ಧೆ ಯಶಸ್ವಿಯಾಗಿ ಸಂಪನ್ನಗೊಂಡಿತು.
ಪ್ರಾಥಮಿಕ ಹಾಗೂ ಪ್ರೌಢ ಶಾಲೆ ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗಿತ್ತು. ವಿವಿಧ ಶಾಲೆಗಳ ಒಟ್ಟು 36 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅಂತಿಮವಾಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಂದ ತಲಾ 6 ಜನರಂತೆ ಒಟ್ಟು 12 ವಿದ್ಯಾರ್ಥಿಗಳು ಬಹುಮಾನ ಪಡೆದರು. ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ವಿದ್ಯಾರ್ಥಿಗಳಿಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಡಾ. ಪ್ರೇಮಾ ಗ್ರಾಮೋಪಾದ್ಯೆ ಅವರು ವಿಜೇತರಿಗೆ ಬಹುಮಾನ ವಿತರಿಸಿದರು. ಪರಮೇಶ್ವರ ಹೆಗಡೆ ಹಾಗೂ ಸಂತ ಮೀರಾ ಶಾಲೆಯ ಮುಖ್ಯಾಧ್ಯಾಪಕಿ ಸುಜಾತಾ ದಪ್ತಾರ್ದಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಭಟ್ ಪೂರ್ಣ ಕಾರ್ಯಕ್ರಮ ನಿರೂಪಿಸಿದರು.
ಬೆಳಗಾವಿಯಲ್ಲಿ ಬುಧವಾರ ಭಗವದ್ಗೀತಾ ಕಂಠಪಾಟ ಸ್ಪರ್ಧೆ
https://pragati.taskdun.com/bhagavadgeeta-compition-on-nov-30-in-belagavi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ