ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗ್ರಾಮ ಪಂಚಾಯಿತಿ ನೌಕರರನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಬೇಕೆಂದು ಆಗ್ರಹಿಸಿ ಸಿಬ್ಬಂದಿಗಳು ಧರಣಿ ನಡೆಸುತ್ತಿರುವ ಘಟನೆ ಬೈಲಹೊಂಗಲದ ಒಕ್ಕುಂದ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.
ತಮ್ಮನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಕಳೆದ ಎರಡು ದಿನಗಳಿಂದ ಸಿಬ್ಬಂದಿಗಳು ಅನಿರ್ಧಿಷ್ಟಾವಧಿ ಸತ್ಯಾಗ್ರಹ ಆರಂಭಿಸಿದ್ದಾರೆ.
ಸೋಂಕಿನಿಂದ ಆಸ್ಪತ್ರೆಗೆ ದಾಖಲಾದರೆ ಚಿಕಿತ್ಸಾ ವೆಚ್ಚವನ್ನು ಪಂಚಾಯಿತಿಯಿಂದಲೇ ಭರಿಸಬೇಕು. ಸುರಕ್ಷಾ ಸಾಧನಗಳನ್ನು ನೀಡಬೇಕು ಹಾಗೂ ನಮ್ಮ ಕುಟುಂಬದ ಸದಸ್ಯರಿಗೂ ವ್ಯಾಕ್ಸಿನ್ ನೀಡಬೇಕು ಅಲ್ಲಿಯವರೆಗೂ ಕೋವಿಡ್ ಗೆ ಸಂಬಂಧಿಸಿದ ಕೆಲಸಗಳನ್ನು ಮಾಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಮಾಸ್ಕ್ ಧರಿಸದೇ ಓಡಾಡಿದ ತಹಶೀಲ್ದಾರ್; ದಂಡ ವಿಧಿಸಿದ ಪೊಲೀಸರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ